ಶಿರಾ: ಶಿರಾದಲ್ಲಿ ಜಿಲ್ಲಾಮಟ್ಟದ ಗುರುಭವನ ನಿರ್ಮಾಣ ಮಾಡುತ್ತೇನೆ ಎಂದು ಕರ್ನಾಟಕ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.
ನಗರದ ಸೋಮೇಶ್ವರ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಸನಮ್ವಯಾಧಿಕಾರಿಗಳ ಕಚೇರಿ, ತಾಲೂಕು ಶಿಕ್ಷಕರ ದಿನಾಚರಣೆ ಆಚರಣಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೭ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಿರಾದಲ್ಲಿ ಹಲವು ಮೊರಾರ್ಜಿ ಶಾಲೆಗಳು, ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಸರಕಾರಿ ಪ.ಪೂ ಕಾಲೇಜು, ಸರಕಾರಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಪ್ರಾಥಮಿಕ ಹಂತದಿಂದ ಕಾಲೇಜು ಹಂತಗಳವರೆಗೂ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸಾವಿರಾರು ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದ್ದ ರಿಂದ ನಗರದಲ್ಲಿ ಗುರುಭವನ ನಿರ್ಮಾಣಕ್ಕೆ ಒಂದು ಉತ್ತಮ ಸ್ಥಳಾವಕಾಶ ದೊರಕಿದೆ. ಈ ಬಗ್ಗೆ ಇಲಾಖೆಯ ಅಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದೇನೆ ಎಂದರು.
ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಜಿಲ್ಲಾಮಟ್ಟದ ಗುರುಭವನ ಇಲ್ಲ. ಆದ್ದರಿಂದ ಶಿರಾದಲ್ಲಿ ನಿರ್ಮಾಣ ಮಾಡುವ ಯೋಜನೆ ಇದೆ ಎಂದರಲ್ಲದೆ, ಶಿರಾ ತಾಲೂಕಿಗೆ ವೃತ್ತಿಪರ ಕೋರ್ಸ್ಗಳಿಗೆ ತರಬೇತಿ ನೀಡುವ ಕೇಂದ್ರ ಶೀಘ್ರದಲ್ಲಿಯೇ ಪ್ರಾರಂಭವಾಗಲಿದೆ ಎಂದರು.
ಕರ್ನಾಟಕ ರಾಜ್ಯ ಪ್ರಾಥ ಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಹನುಮಂತರಾಜು.ಬಿ.ಆರ್ , ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಕೃಷ್ಣಪ್ಪ, ತಾ.ಪಂ. ಇಓ ಹರೀಶ್, ಪೌರಾಯುಕ್ತ ರುದ್ರೇಶ್, ಗೃಹ ಸಚಿವರ ವಿಶೇಷಾಧಿಕಾಶರಿ ಡಾ.ಕೆ.ನಾಗಣ್ಣ, ಕರ್ನಾಟಲ ರಾಜ್ಯ ಸರಕಾರಿ ನೌಕರರ ಸಂಘದ ವಿನೋದ್.ಎಂ.ಎ, ನೇಜಂತಿ ರಾಜಣ್ಣ, ಕೆ.ಸಿ.ಜೀವನ್ ಪ್ರಕಾಶ್, ಡಾ.ನಾಗೇಶ್, ಶಿವರಾಮಯ್ಯ, ಮಂಜುನಾಥ್ ಇದ್ದರು.