ತಿಪಟೂರು | ತಾಯಿ ಮಗಳ ಮೇಲೆ ಹರಿದ ಬಸ್; ಮೃತದೇಹ ಎತ್ತದಂತೆ ಗ್ರಾಮಸ್ಥರ ಧರಣಿ

ವರದಿ: ಮಿಥುನ್‌ ತಿಪಟೂರು

ತಿಪಟೂರು: ರಸ್ತೆ ಬದಿಯಲ್ಲಿ ನಡೆದು ಸಾಗುತ್ತಿದ್ದ ತಾಯಿ, ಮಗಳ ಮೇಲೆ ಬಸ್‌ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರಂತರ ಅಪಘಾತಗಳಿಂದ ರೋಸಿ ಹೋಗಿರುವ ಗ್ರಾಮಸ್ಥರು ಶವಗಳನ್ನು ರಸ್ತೆಯಿಂದ ತೆಗೆಯದಂತೆ ಅಧಿಕಾರಿಗಳ ವಿರುದ್ಧ ಧರಣಿ ಕುಳಿತರು.

ಬೈಪಾಸ್ಗೆ ಹೊಂದಿಕೊಂಡಂತಿರುವ ರಾಮಶೆಟ್ಟಿ ಹಳ್ಳಿ ಗ್ರಾಮದ ತಾಯಿ ಕಮಲಮ್ಮ (35), ಮಗಳು ವೀಣಾ (14) ರಸ್ತೆ ಅಪಘಾತದಲ್ಲಿ ಮೃತಪಟ್ಟವರು.

ಸೋಮವಾರ ಬಳಿಗ್ಗೆ 9:50ರ ವೇಳೆಯಲ್ಲಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ತಾಯಿ ಮಗಳ ಹಿಂಬದಿಯಿಂದ ಅತಿ ವೇಗವಾಗಿ ಬರುತ್ತಿದ್ದ ಗಾರ್ಮೆಂಟ್‌ ಮಿನಿ ಬಸ್‌ಗೆ ರಾಮಶೆಟ್ಟಿಹಳ್ಳಿ ಕಡೆಯಿಂದ ಟಿವಿಎಸ್ ಮೊಪೆಡ್ ಗಾಡಿಯಲ್ಲಿ ರೈತನೊಬ್ಬ ದಿಢೀರನೆ ಅಡ್ಡ ಬಂದಿದ್ದಾನೆ. ಟಿವಿಎಸ್ ಸವಾರರನ್ನು ತಪ್ಪಿಸುವ ಸಲುವಾಗಿ ಚಾಲಕ ಬಸ್ಸನ್ನು ಬಲಕ್ಕೆ ತಿರುಗಿಸಿದ್ದಾನೆ. ಇದರಿಂದ ರಸ್ತೆ ಬದಿಯಲ್ಲಿ ನಡೆದು ಬರುತ್ತಿದ್ದ ತಾಯಿ ಮಗಳು ಸಾವಿಗೀಡಾಗಿದ್ದಾರೆ.

ವಿಷಯ ತಿಳಿದ ಪೊಲೀಸರು ಆಗಮಿಸಿ ಸ್ಥಳ ಮಹಜರು ಮಾಡಿ, ಮೃತ ದೇಹವನ್ನು ಸಾಗಿಸಲು ಮುಂದಾದಾಗ ರೊಚ್ಚಿಗೆದ್ದ ಗ್ರಾಮಸ್ಥರು ಮೃತ ದೇಹಗಳನ್ನು ತೆಗೆಯಲು ಬಿಡದೆ ಧರಣಿ ಕೂತರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು.

ಕೂಡಲೇ ತಾಲೂಕು ದಂಡಾಧಿಕಾರಿ ಪವನ್ ಕುಮಾರ್ ಮತ್ತು ಡಿವೈಎಸ್ಪಿ ವಿನಾಯಕ ಶೆಟ್ಟಿಗೇರಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪ್ರತಿಭಟನಾಕಾರರ ಮನವೊಲಿಸಿ ಪೊಲೀಸ್ ಸಿಬ್ಬಂದಿಗಳ ಕಾವಲಿನಲ್ಲಿ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ವಿಪರ್ಯಾಸವೆಂದರೆ ಟಿವಿಎಸ್‌ ಮೊಪೆಡ್‌ ಚಾಲಕನೂ ಅಪಘಾತಕ್ಕೀಡಾಗಿ ಕಾಲು ಮುರಿದುಕೊಂಡಿದ್ದಾನೆ. ಈತನನ್ನು ಹಾಸನ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಅಧಿಕಾರಿ ಕೇಶವ ಪಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಅಂಡರ್ ಪಾಸ್ ಅಥವಾ ಸ್ಕೈ ವಾಕರ್ ನಿರ್ಮಿಸುವಂತೆ ಒತ್ತಾಯಿಸಿದರು. ಸ್ಥಳದಲ್ಲಿ ಬಿಇಓ ಚಂದ್ರಯ್ಯ, ನಗರ ಠಾಣಾ ಇನ್ಸ್ಪೆಕ್ಟರ್ ವೆಂಕಟೇಶ್, ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರ್ ಸಿದ್ದರಾಮಯ್ಯ, ಪೊಲೀಸ್ ಸಿಬ್ಬಂದಿ, ಶಿಕ್ಷಣ ಇಲಾಖೆಯ ಕೆಲ ಸಿಬ್ಬಂದಿ ಮತ್ತು ಸಾರ್ವಜನಿಕರು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles