ತುಮಕೂರು | ವಿಕಲಚೇತನ ಫಲಾನುಭವಿಗಳಿಗೆ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ : ಪೂರ್ವ ಸಿದ್ಧತೆಗೆ ಎಡಿಸಿ ಸೂಚನೆ

ತುಮಕೂರು : ಕೇಂದ್ರ ಸರ್ಕಾರದ ಎಡಿಐಪಿ ಯೋಜನೆಯಡಿ ವಿಕಲಚೇತನರಿಗೆ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲು ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ತಮ್ಮ ಕೊಠಡಿಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಅಲಿಂಕೋ ಸಂಸ್ಥೆಯು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ನವೆಂಬರ್ ಮಾಹೆಯಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಡಮನಿ ಅವರಿಗೆ ಸೂಚಿಸಿದರು.

ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಈಗಾಗಲೇ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಮೌಲ್ಯಮಾಪನ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗಿದೆ. ಕೇಂದ್ರ ಸರ್ಕಾರದ alimco ಸಂಸ್ಥೆಯ ವತಿಯಿಂದ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು, ಸಾಧನ ಸಲಕರಣೆಗಳನ್ನು ವಿತರಿಸಲು ಜಿಲ್ಲೆಯ 2,460 ವಿಕಲಚೇತನ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಡಮನಿ ಸಭೆಗೆ ಮಾಹಿತಿ ನೀಡಿದರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ಮತ್ತು ದಾದಿಯರ ಸೇವೆ ಒದಗಿಸಬೇಕು. ಸುರಕ್ಷತೆಗಾಗಿ ಪೊಲೀಸ್ ಇಲಾಖೆ ನೆರವು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಬೇಕು. ವಿದ್ಯುತ್ ವ್ಯತ್ಯಯವಾಗದಂತೆ ಕ್ರಮವಹಿಸಬೇಕೆಂದು ಸಂಬAಧಿಸಿದ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮುಜರಾಯಿ ಇಲಾಖೆ ತಹಶೀಲ್ದಾರ್ ಸವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಕಾರ್ಯಕ್ರಮದ ನಿರೂಪಣಾಧಿಕಾರಿ ದಿನೇಶ್, ಸೇರಿದಂತೆ ಮತ್ತಿತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles