ಹಸಿರು ಪಟಾಕಿಗಳನ್ನು ಮಾತ್ರ ಬಳಸಲು ಆಯುಕ್ತರ ಸೂಚನೆ

ತುಮಕೂರು : ದೀಪಾವಳಿ ಆಚರಣೆ ಸಂದರ್ಭದಲ್ಲಿ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ತಡೆಗಟ್ಟುವ ಸಲುವಾಗಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹಚ್ಚಲು/ಸಿಡಿಸಲು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಅವಕಾಶವಿದ್ದು, ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಹಸಿರು ಪಟಾಕಿಯ ಚಿಹ್ನೆ. ಕ್ಯೂಆರ್ ಕೋಡ್ ಇರುವಂತಹ ಪಟಾಕಿಗಳನ್ನು ಮಾತ್ರ ಬಳಸಬೇಕು. ನಗರದ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸೇರಿದಂತೆ ಯಾವುದೇ ನಿಷೇಧಿತ ಪ್ರದೇಶಗಲ್ಲಿ ಪಟಾಕಿಗಳನ್ನು ಸಿಡಿಸಬಾರದು ಎಂದು ತಿಳಿಸಿದ್ದಾರೆ.

ಪಟಾಕಿ ಬಳಸುವ ಸಂದರ್ಭದಲ್ಲಿ ಇಯರ್ ಪ್ಲಗ್/ಗಾಗಲ್ಸ್ ನಂತಹ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಪಟಾಕಿ ಸಿಡಿಸಿದ ನಂತರ ಉಂಟಾದ ತ್ಯಾಜ್ಯವನ್ನು ಪಾಲಿಕೆ ವಾಹನಗಳಿಗೆ ಕಸ ವಿಂಗಡಣೆ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles