ಒಕ್ಕೂಟದ ಅಭಿವೃದ್ಧಿಗೆ ಹೆಚ್ಚಿನ ಶ್ರಮ ವಹಿಸುವೆ: ಶಾಸಕ ಹೆಚ್.ವಿ. ವೆಂಕಟೇಶ್

ತುಮಕೂರು: ತುಮಕೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷ ಹಾಗೂ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಸೋಮವಾರ ತುಮುಲ್‌ನ ಅಧ್ಯಕ್ಷರ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡರು.

ನಂತರ ಮಾತನಾಡಿದ ಅವರು, ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಹಾಲು ಒಕ್ಕೂಟದ ಅಭಿವೃದ್ಧಿಗೆ ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡುವ ನಿಟ್ಟಿನಲ್ಲಿ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ಪಡೆದು ಕಾರ್ಯನಿರ್ವಹಿಸುತ್ತೇನೆ ಎಂದರು.

ಹಾಲು ಒಕ್ಕೂಟವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಜಿಲ್ಲೆಯ ಸಚಿವರುಗಳು, ಶಾಸಕರು ಹಾಗೂ ಹಾಲು ಒಕ್ಕೂಟದ ನಿರ್ದೇಶಕರುಗಳ ಸಲಹೆ, ಮಾರ್ಗದರ್ಶನದೊಂದಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ಹೇಳಿದರು.

ಹಾಲು ಒಕ್ಕೂಟದ ವತಿಯಿಂದ ರೈತರಿಗೆ ಏನೇನು ಅನುಕೂಲ ಮಾಡಲು ಸಾಧ್ಯವೋ ಆ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ನಾಗೇಶ್‌ಬಾಬು, ಎಸ್.ಆರ್. ಗೌಡ, ಡಿ. ಕೃಷ್ಣಕುಮಾರ್, ಮಾದಿಹಳ್ಳಿ ಪ್ರಕಾಶ್, ನಂಜೇಗೌಡ, ಸಿ.ವಿ. ಮಹಲಿಂಗಯ್ಯ, ಸಿದ್ದಗಂಗಯ್ಯ, ಚಂದ್ರಶೇಖರೆಡ್ಡಿ, ತುಮುಲ್ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಕಲ್ಲಹಳ್ಳಿ ದೇವರಾಜು, ವಿಜಯಕುಮಾರ್, ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles