ಗುಬ್ಬಿ : ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೋಕ್ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಗುಬ್ಬಿ ತಾಲೂಕ್ ಘಟಕದ ವತಿಯಿಂದ ಅನಿರ್ದಿಷ್ಟ ಧರಣಿ ನಡೆಸಿದರು.
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಗಳ ಕೇಂದ್ರ ಸಂಘದ ತಾಲೂಕು ಅಧ್ಯಕ್ಷೆ ಸುಮತಿ ಮಾತನಾಡಿ ರಾಜ್ಯ ಸಂಘದ ನಿರ್ದೇಶನದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟ ಧರಣಿ ನಡೆಸುತ್ತಿದ್ದು. ನಾಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಿಣಿ ಹಮ್ಮಿಕೊಳ್ಳಲಾಗಿದ್ದು. ಸರ್ಕಾರ ಮೂಲಭೂತ ಸೌಕರ್ಯಗಳನ್ನು ದೊರಕಿಸಿಕೊಡಬೇಕು. 15- 20 ವರ್ಷಗಳಿಂದ ಒಂದೇ ಹುದ್ದೆಯಲ್ಲಿ ಮುಂದುವರೆಸಿದ್ದು ಮುಂಬಡ್ತಿ ನೀಡಬೇಕು.
ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ ಕೋರಿದರು ವರ್ಗಾವಣೆ ಮಾಡಿ ಕೊಡುತ್ತಿಲ್ಲ. ಕೆಲಸಕ್ಕೆ ಸಂಬಂಧಿಸಿದಂತೆ 21 ಮೊಬೈಲ್ ಆಪ್ ಗಳಿದ್ದು ಯಾವುದೇ ಇಂಟರ್ ನೆಟ್ ಸೌಲಭ್ಯ ಒದಗಿಸುತ್ತಿಲ್ಲ. ಪ್ರಯಾಣದ ಭತ್ಯೆ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.
ಗ್ರಾಮ ಆಡಳಿತ ಅಧಿಕಾರಿ ಮೋಹನ್ ಕುಮಾರ್ ಮಾತನಾಡಿ, ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿ ಕೆಲಸ ನಿರ್ವಹಿಸುತ್ತಿದ್ದು. ಹಲವಾರು ಬಾರಿ ಮನವಿ ಮಾಡಿದರು ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಒತ್ತಡದಿಂದ ಕೆಲಸ ಮಾಡುವ ಅನಿವಾರ್ಯತೆ ಉಂಟಾಗಿದ್ದು. ಸೇವೆಯಲ್ಲಿ ರಕ್ಷಣೆ ನೀಡಬೇಕು. ಕರ್ತವ್ಯ ನಿರ್ವಹಿಸುವಾಗ ಜೀವ ಹಾನಿ ಆಗುವ ಗ್ರಾಮ ಆಡಳಿತ ಅಧಿಕಾರಿಗಳ ಕುಟುಂಬಕ್ಕೆ 25 ಲಕ್ಷ ರೂಗಳ ಪರಿಹಾರ ನೀಡಬೇಕು ಎಂದರು.
ಗ್ರಾಮ ಸಹಾಯಕ ಸಂಘದ ಅಧ್ಯಕ್ಷ ಪುಟ್ಟರಾಜು ಮಾತನಾಡಿ, ಕೆಲಸದ ಒತ್ತಡದಿಂದ ತಾಲೂಕಿನಲ್ಲಿ ಅನೇಕ ಸಾವು ನೋವುಗಳು ಕಂಡುಬಂದಿದ್ದು ಕೂಡಲೇ ಎಚ್ಚೆತ್ತು ಕೆಲಸದ ಒತ್ತಡ ಕಡಿಮೆಗೊಳಿಸಿ ಸೇವಾ ಭದ್ರತೆಯನ್ನು ಒದಗಿಸಿಕೊಡಬೇಕು ಎಂದು ತಿಳಿಸಿದರು.