ಸಂಘಟನಾತ್ಮಕವಾಗಿ ಮುಂದುವರೆದರೆ ಅಭಿವೃದ್ಧಿ ಸಾಧ್ಯ

ಗುಬ್ಬಿ : ಸಮುದಾಯದ ಬಂಧುಗಳು ಆರ್ಥಿಕ ಮತ್ತು ಶೈಕ್ಷಣಿಕವಾಗಿ ಸದೃಢರಾಗಬೇಕೆಂದು ಆದಿ ಜಾಂಬವ ಯುವ ಬ್ರಿಗೇಡ್ ತಾಲೂಕು ಅಧ್ಯಕ್ಷ ಬಸವರಾಜು ತಿಳಿಸಿದರು.   

ಪಟ್ಟಣದ  ಡಾ. ಬಾಬು ಜಗಜೀವನ ರಾಮ್ ಭವನದಲ್ಲಿ  ತಾಲೂಕು ಆದಿ ಜಾಂಬವ  ಯುವ ಬ್ರಿಗೇಡ್ ವತಿಯಿಂದ  ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಾಗಾರವನ್ನು ಕುರಿತು ಮಾತನಾಡಿದ ಅವರು,  ನಮ್ಮ ಸಮುದಾಯವು ಆರ್ಥಿಕ, ಸಾಮಾಜಿಕ,  ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕಿದೆ. ಈ ನಿಟ್ಟಿನಲ್ಲಿ  ಒಂದು ವರ್ಷದಿಂದ  ಪ್ರತಿ ತಿಂಗಳ 1ನೇ ತಾರೀಕಿನಂದು ಸಮುದಾಯದ ಜನರಿಗೆ ಸಂಘಟನೆಯ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡುತ್ತಾ ಬರುತ್ತಿದ್ದು. ಇಂತಹ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಬಂಧುಗಳು ಪಾಲ್ಗೊಂಡು  ಸದುಪಯೋಗ ಪಡೆದುಕೊಳ್ಳಬೇಕೆಂದು  ತಿಳಿಸಿದರು.

 ಪ್ರಧಾನ ಕಾರ್ಯದರ್ಶಿ ಶಿವರಾಜು ಮಾತನಾಡಿ,  ಸಂಘಟನಾತ್ಮಕವಾಗಿ ನಾವೆಲ್ಲರೂ ಒಗ್ಗಟ್ಟಾಗಿ ಎಲ್ಲಾ ರಂಗದಲ್ಲಿಯೂ ಮುಂದುವರೆಯಬೇಕೆಂಬ  ಚಿಂತನೆಯನ್ನು ಸಮುದಾಯದ ಜನರಿಗೆ ಅರಿವು ಮೂಡಿಸಲಾಗಿದ್ದು, ತಮ್ಮ ತಮ್ಮ ಗ್ರಾಮಗಳಲ್ಲಿ ಸ್ಥಳೀಯವಾಗಿ ಜಾಗೃತಿ ಮೂಡಿಸುವ ಮೂಲಕ ಸಂಘಟನಾತ್ಮಕವಾಗಿ ಸಜ್ಜುಗೊಳಿಸಬೇಕು. ಮುಂದಿನ ದಿನಗಳಲ್ಲಿ ಸಮುದಾಯದ ಅಭಿವೃದ್ಧಿಗೆ ಪೂರಕವಾದ ಅನೇಕ ಕಾರ್ಯಕ್ರಮಗಳನ್ನು ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

 ಇದೇ ಸಂದರ್ಭದಲ್ಲಿ ಕಸಬಾ ಹೋಬಳಿ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 

 ಕಾರ್ಯಕ್ರಮದಲ್ಲಿ ಕಾರ್ಯದರ್ಶಿಯಾದ ನವೀನ್ ಕುಮಾರ್, ಗೌರವಾಧ್ಯಕ್ಷ ಮುದ್ದಯ್ಯ, ಖಜಾಂಚಿ ನರಸಿಂಹಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ರೇಖಾ, ಕಡಬ ಹೋಬಳಿ ಸಂಘಟನಾ ಕಾರ್ಯದರ್ಶಿ ರೇಣುಕಮ್ಮ, ನಾಗರಾಜು ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles