ನವದೆಹಲಿ: ವಿದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಯೊಬ್ಬನಿಗೆ ಮಂಕಿಪಾಕ್ಸ್ ತಗುಲಿರುವುದಾಗ ಶಂಕಿಸಲಾಗಿದ್ದು, ರೋಗಿಯನ್ನು ಆಸ್ಪತ್ರೆಯೊಂದರಲ್ಲಿ ಪ್ರತ್ಯೇಕವಾಗಿ ಇರಿಸಿ ನಿಗಾವಹಿಸಿಸಲಾಗಿದೆ. ಆತನ ಆರೋಗ್ಯ ಸ್ಥಿರವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ.
ಶಂಕಿತ ವ್ಯಕ್ತಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಮಂಕಿಪಾಕ್ಸ್ ವೈರಸ್ ಮೂಲ ತಿಳಿಯಲು ಹಾಗೂ ಭಾರತದಲ್ಲಿ ಅದರ ಪರಿಣಾಮವನ್ನು ಅರಿಯಲು ಅಧ್ಯಯನ ಮಾಡಲಾಗುತ್ತಿದೆ ಎಂದ ತಿಳಿಸಲಾಗಿದೆ.
ಜನರು ಹೆದರುವ ಅಗತ್ಯವಿಲ್ಲ, ಸೋಂಕಿನಿಂದ ಆಗಬಹುದಾದ ಅಪಾಯವನ್ನು ತಪ್ಪಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಆಫ್ರಿಕಾದ ಕಾಂಗೋ ಸೇರಿದಂತೆ ೧೩ ದೇಶಗಳಲ್ಲಿ ಮಂಕಿಪಾಕ್ಸ್ ಕಾಯಿಲೆ ಹರಡುತ್ತಿರುವುದರಿಂದ ವಿಶ್ವ ಆರೋಗ್ಯ ಸಂಸ್ಥೆ ಜಾಗತೀಕ ತುರ್ತು ಪರಿಸ್ಥಿತಿ ಘೋಷಿಸಿದೆ.