ಅ.30ರಂದು 16 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್

ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕ್ಟೋಬರ್ 30ರಂದು ಜಿಲ್ಲೆಯ 16 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ಈ ಅದಾಲತ್‌ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು-ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ಟೋಬರ್ 30ರಂದು ಜಿಲ್ಲೆಯ ಶಿರಾ ತಾಲ್ಲೂಕಿನ ಲಕ್ಷ್ಮೀ ಸಾಗರ; ತುರುವೇಕೆರೆ ತಾಲ್ಲೂಕಿನ ಹಡವನಹಳ್ಳಿ; ತಿಪಟೂರು ತಾಲೂಕಿನ ಬಳುವನೇರಲು; ಮಧುಗಿರಿ ತಾಲ್ಲೂಕಿನ ಬ್ಯಾಲ್ಯ; ತುಮಕೂರು ತಾಲೂಕಿನ ನಾಗವಲ್ಲಿ ಹಾಗೂ ಅರೆಯೂರು; ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ, ಚೌಳಕಟ್ಟೆ ಹಾಗೂ ತಿಮ್ಮನಹಳ್ಳಿ; ಕುಣಿಗಲ್ ತಾಲೂಕಿನ ಎಡೆಯೂರು, ಬೇಗೂರು, ಭಕ್ತರಹಳ್ಳಿ ಹಾಗೂ ಯಲಿಯೂರು; ಕೊರಟಗೆರೆ ತಾಲೂಕಿನ ನೀಲಗೊಂಡನಹಳ್ಳಿ; ಪಾವಗಡ ತಾಲ್ಲೂಕಿನ ನಲಿಗಾನಹಳ್ಳಿ; ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles