ತಿಪಟೂರು: ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಹೆಚ್.ಸಿ. ಕಾಂತರಾಜು.ಕೆ.ಸಿ (50) ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಅ.23ರಂದು ಬೆಳಿಗ್ಗೆ 8 ಗಂಟೆಗೆ ಕರ್ತವ್ಯದಿಂದ ಬಿಡುಗಡೆಗೊಂಡು ವಿಶ್ರಾಂತಿಗಾಗಿ ಸ್ವಗ್ರಾಮವಾದ ಹುಳಿಯಾರು ಹೋಬಳಿ ಕಂಪನಹಳ್ಳಿ ಗ್ರಾಮಕ್ಕೆ ತೆರಳಿದ್ದರು. ಮಧ್ಯಾಹ್ನ ಸುಮಾರು 2.50ರ ಸಮಯದಲ್ಲಿ ಹೃದಯಾಘಾತವಾಗಿದೆ. ಚಿಕಿತ್ಸೆಗಾಗಿ ಹುಳಿಯಾರು ಖಾಸಗೀ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನವಾಗಲಿಲ್ಲ. ಪರೀಕ್ಷೆ ನಂತರ ಮರಣಹೊಂದಿರುವುದಾಗಿ
ವೈದ್ಯರು ತಿಳಿಸಿದ್ದಾರೆ.
ಚಿ.ನಾ.ಹಳ್ಳಿ ತಾಲ್ಲೂಕಿನ ಇವರು 2002 ರಂದು ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಅಮೃತೂರು ಪೊಲೀಸ್ ಠಾಣೆಯಲ್ಲಿ 3 ತಿಂಗಳ ಕಾಲ ಕರ್ತವ್ಯ ನಿರ್ವಹಿಸಿ ನಂತರ ರಾಯಚೂರು ಪೊಲೀಸ್ ತರಬೇತಿ ಕೇಂದ್ರದಲ್ಲಿ 9 ತಿಂಗಳ ಕಾಲ ತರಬೇತಿ ಮುಗಿಸಿಕೊಂಡು ವಾಪಸ್ ಅಮೃತೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, ನಂತರ ಹೊನ್ನವಳ್ಳಿ ಪೊಲೀಸ್ ಠಾಣೆ, ಕೆ.ಬಿ.ಕ್ರಾಸ್, ಚಿಕ್ಕನಾಯಕನಹಳ್ಳಿಯಲ್ಲಿಯೂ ಕರ್ತವ್ಯ ನಿರ್ವಹಿಸಿರುತ್ತಾರೆ. ಚಿಕ್ಕನಾಯಕನಹಳ್ಳಿ ಠಾಣೆಯಿಂದ ತಿಪಟೂರು ನಗರ ಠಾಣೆಗೆ ವರ್ಗಾವಣೆಯಾಗಿ ಬಂದು ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನು ವಾರದ ಬ್ರಿಬಿಂಗ್ ಸಭೆಯಲ್ಲಿ ಪ್ರಸಕ್ತ ವಾರದಲ್ಲಿ ರಾತ್ರಿ ಎಸ್.ಹೆಚ್.ಒ ಕರ್ತವ್ಯಕ್ಕೆ ನೇಮಕ ಮಾಡಲಾಗಿತ್ತು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.